ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ
ರಘು ಕೌಟಿಲ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.ಮೈಸೂರಿನ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಾಜ್ಯಸಭೆ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಎಂ.ನಾಗರಾಜ್ ಅವರು ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ.ರಾಜ್ಯಸಭೆಯ 4 ಮತ್ತು ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.













