ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಮೂರು ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು, ಸದ್ಯ ಅವರು
ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯಸಭೆಯ ಉಪಸಭಾಪತಿಯಾಗಿದ್ದ ಹಾಗೂ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೆ ಎಐಸಿಸಿ ಅವಕಾಶ ಕಲ್ಪಿಸಿದೆ. ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸುತ್ತಿದ್ದು ಆ ಸಮಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.













