ನವದೆಹಲಿ: ಉತ್ತರಪ್ರದೇಶ ಮತ್ತು ಉತ್ತರಾಖಂಡದ 11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 16ರಂದು ನಡೆಯಲಿದೆ.ಈ ಫಲಿತಾಂಶಗಳು ಮೇಲ್ಮನೆಯ
ಸಂಖ್ಯಾಬಲದಲ್ಲಿ ಯಾವುದೇ ದೊಡ್ಡ ಬದಲಾವಣೆ ತರುವ ಸಾಧ್ಯತೆಯಿಲ್ಲ.ಚುನಾವಣೆಯ ನಂತರ, ಸದನದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಬಲ 155ಕ್ಕೆ ಏರುವ ಸಾಧ್ಯತೆ ಇದೆ. ‘ಇಂಡಿಯಾ’ ಮೈತ್ರಿಕೂಟದ ಬಲ 64 ಆಗಬಹುದು. ಇತರ ಪಕ್ಷಗಳ ಸಂಖ್ಯೆ 26ಕ್ಕೆ ಇಳಿಕೆಯಾಗಬಹುದು.
ಚುನಾವಣೆಗೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನ. ಮರುದಿನ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ ಎಂದು ಚುನಾವಣಾ ಆಯೋಗ ತಿಳಿಸಿದೆ.
ಉತ್ತರ ಪ್ರದೇಶದಲ್ಲಿ ಹತ್ತು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.






