ಐವರ್ನಾಡು:ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ದಿನ ಕರ್ನಾಟಕ
ಕಬಡ್ಡಿ ಅಸೋಸಿಯೇಷನ್ನ ಚೇರ್ಮೆನ್ ರಾಕೇಶ್ ಮಲ್ಲಿ ಆಗಮಿಸಿ ಶುಭ ಹಾರೈಸಿದರು. ಅರಂತೋಡು ಪಾಪ್ಯುಲರ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ,ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಸಲಹೆಗಾರರಾದ ಪುರುಷೋತ್ತಮ ಪೂಜಾರಿ,
ಸುಳ್ಯ ತಾಲೂಕು

ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಮಾಧವ, ಪ್ರಮುಖರಾದ ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಶಶಿಧರ ಎನ್.ಜೆ ಮತ್ತಿತರರು ಉಪಸ್ಥಿತರಿದ್ದರು.ಐವರ್ನಾಡು ಗೆಳೆಯರ ಬಳಗದ ಎಸ್.ಎನ್.ಮನ್ಮಥ, ಸಮಿತಿ ಸಂಚಾಲಕರಾದ ದಿನೇಶ್ ಮಾಡ್ತಿಲ ವಂದಿಸಿದರು.
ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಸಂಚಾಲಕರಾದ ವಾಸುದೇವ ಬೊಳುಬೈಲು ಮತ್ತಿತರರು ಉಪಸ್ಥಿತರಿದ್ದರು.