ಮುಕ್ಕೂರು:ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ಇದರ ವತಿಯಿಂದ ಚಾಮುಂಡಿಮೂಲೆ ಅಭಯ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಲಾಯಿತು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಬಳಿಕ ಪರಸ್ಪರ ರಕ್ಷೆ ಕಟ್ಟಿ ರಕ್ಷಾಬಂಧನ ಕಾರ್ಯಕ್ರಮ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ
ನಿವೃತ್ತ ಶಿಕ್ಷಕ ಗಿರಿಶಂಕರ ಸುಲಾಯ ಉನ್ಯಾಸ ನೀಡಿದರು. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅಧ್ಯಕ್ಷತೆ ವಹಿಸಿದ್ದರು. ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಸಾವಿತ್ರಿ ಚಾಮುಂಡಿಮೂಲೆ ಉಪಸ್ಥಿತರಿದ್ದರು. ಶ್ರೀ ಉಳ್ಳಾಲ್ತಿ ಭಕ್ತವೃಂದದ ಸದಸ್ಯ ಜಯಂತ ಗೌಡ ಕುಂಡಡ್ಕ ವಂದಿಸಿದರು. ಯಕ್ಷಿತಾ ಚಾಮುಂಡಿಮೂಲೆ ನಿರೂಪಿಸಿದರು.





