ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಫೆ.2ರಂದು
ಸಂಜೆ ಶ್ರೀ ರಕ್ತೇಶ್ವರಿ ದೈವದ ಸನ್ನಿಧಿಯಲ್ಲಿ ತಂಬಿಲ ಸೇವೆ ಹಾಗೂ ಭಂಡಾರ ತೆಗೆಯುವುದು ನಡೆದು ರಾತ್ರಿ ದೇಗುಲದಲ್ಲಿ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ. ರಾತ್ರಿ 8ರಿಂದ ಶ್ರೀ ರಕ್ತೇಶ್ವರಿ ದೈವದ ನೇಮ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತರು ಉಪಸ್ಥಿತರಿದ್ದರು.





