ಬಂಟ್ವಾಳ: ಪುನರ್ ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವ ನಡೆಯುತ್ತಿರುವ ಬಂಟ್ವಾಳ ತಾಲೂಕಿನ ನೆಲ್ಲಿಗುಡ್ಡೆ ಶ್ರೀ ರಕ್ತೇಶ್ವರಿ ದೈವಸ್ಥಾನದ ಸನ್ನಿಧಿಯಲ್ಲಿ ಹಸಿರು ವನ ನಿರ್ಮಾಣಕ್ಕೆ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಚಾಲನೆ ನೀಡಿದರು. ದೈವಸ್ಥಾನದ ಸುತ್ತಲೂ ಇರುವ ಸ್ಥಳದಲ್ಲಿ ವನ ನಿರ್ಮಿಸಲು ನಿರ್ಧರಿಸಲಾಗಿದ್ದು ಡಾ.ಆರ್.ಕೆ.ನಾಯರ್ ಹಾಗು
ಅತಿಥಿಗಳು ವಿವಿಧ ಗಿಡಗಳನ್ನು ನೆಟ್ಟು ಚಾಲನೆ ನೀಡಿದರು.
ಶ್ರೀ ರಕ್ತೇಶ್ವರಿ ದೈವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಕುತ್ಲೂರು

ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಾಮಚಂದ್ರ ಭಟ್, ವಿಭಾ ಶ್ರೀನಿವಾಸ ನಾಯಕ್, ಕ್ಷೇತ್ರದ ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.
ರಕ್ತೇಶ್ವರಿ, ಪಂಜುರ್ಲಿ, ಧರ್ಮ ದೈವಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶೋತ್ಸವಎಪ್ರಿಲ್ 22, 23 ರಂದು ನಡೆಯಯುತಿದೆ.