ಸುಳ್ಯ:ಸುಳ್ಯ ಶ್ರೀರಾಮ ಪೇಟೆಯ ಶ್ರೀರಾಮ ಮಂದಿರದಲ್ಲಿ ಇಂದು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬ್ರಹ್ಮಶ್ರಿ ವೇದಮೂರ್ತಿ ಮಧೂರು ರಾಜೇಶ ಸರಳಾಯ ಅವರ ನೇತೃತ್ವದಲ್ಲಿ ಶ್ರೀ ಮಹಾಗಣಪತಿ, ಶ್ರೀ ಮೂಕಾಂಬಿಕಾ, ಶ್ರೀ ಸೀತಾ ಲಕ್ಷ್ಮಣ ಆಂಜನೇಯ ಸಮೇತ ಶ್ರೀರಾಮ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.ಬೆಳಗ್ಗೆ 7ರಿಂದ
ಕವಾಟೋದ್ಘಾಟನೆ, ಗಣಪತಿ ಹವನ, ಅಷ್ಟೋತ್ತರ ಶತಕಲಶ ಪ್ರತಿಷ್ಠೆ, ನವಕ ಪ್ರತಿಷ್ಠೆ ಪೂ.11ಕ್ಕೆ ಶ್ರೀ ದೇವರ ಪ್ರತಿಷ್ಠೆ, 11.17ಕ್ಕೆ ವೃಷಭ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ.ಮಂತ್ರಾವಾಹನೆ, ನವಕಾಭಿಷೇಕ,ಕಲಶಾಭಿಷೇಕ, ಮಹಾಪೂಜೆ, ನಿತ್ಯ ನೈಮಿತ್ತಿಕ ಪ್ರಾರ್ಥನೆ, ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00 ರಿಂದ
ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ತಾಲೂಕಿನ ವಿವಿಧ ಭಜನಾ ಮಂಡಳಿಯವರಿಂದ ಆಕರ್ಷಕ ಕುಣಿತ ಭಜನೆಯೊಂದಿಗೆ ಅದ್ದೂರಿ ಭಜನಾ ಮೆರವಣಿಗೆ ನಡೆಯಲಿದೆ.ಸಂಜೆ 6 ರಿಂದ ನಾಗಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ, ತಾಯಂಬಕ, ದುರ್ಗಾ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.ರಾತ್ರಿ 7.30ರಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ
ಯಕ್ಷ- ಗಾನ- ನಾಟ್ಯ ವೈಭವ ಕಾರ್ಯಕ್ರಮ ನಡೆಯಲಿದೆ.














