ಸುಳ್ಯ: ಬೆಳಾಲು ಶ್ರೀ ಧರ್ಮಸ್ಥಳ ಪ್ರೌಢಶಾಲೆ ಮುಖ್ಯ ಶಿಕ್ಷಕರಾಗಿ ನಿವೃತ್ತರಾದ ರಾಮಕೃಷ್ಣ ಭಟ್ ಚೊಕ್ಕಾಡಿ ಅವರಿಗೆ ಸಾವ೯ಜನಿಕ ಅಭಿನಂದನಾ ಸಮಾರಂಭ ಚೊಕ್ಕಾಡಿ ದೇಸಿಭವನದಲ್ಲಿ ನಡೆಯಿತು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು
ಬೆಳ್ಳಾರೆ ಜೆಸಿಐ ನೇತೃತ್ವದಲ್ಲಿ ಕಾರ್ಯಕ್ರಮ ಸಂಘಟಿಸಿತ್ತು.
ಉಪನ್ಯಾಸಕ, ಸಂಶೋಧಕ ಪುಂಡಿಕ್ಯಾ ಗಣಪಯ್ಯ ಭಟ್ ಅಭಿನಂದನಾ ಭಾಷಣ ಮಾಡಿದರು. ರಾಮಕೃಷ್ಣ ಭಟ್ ಚೊಕ್ಕಾಡಿ ಅವರ ಅಭಿನಂದನಾ ಗ್ರಂಥ ‘ಅಕ್ಷರ ತೇರಿನ ಸಾರಥಿ ‘ಯನ್ನು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಮಕೃಷ್ಣ ಭಟ್ ಚೊಕ್ಕಾಡಿ ದಂಪತಿಯನ್ನು ಸನ್ಮಾನಿಸಲಾಯಿತು.
ಅಭಿನಂದನಾ ಸಮಿತಿ ಅಧ್ಯಕ್ಷ ಆನೆಕ್ಕಾರು ಗಣಪಯ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಬೆಳ್ಳಾರೆ ಜೆಸಿಐ ಅಧ್ಯಕ್ಷ ಜಗದೀಶ್ ರೈ, ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ, ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್, ಟೆಲಿಕಾಂ ನಿವೃತ್ತ ಅಧಿಕಾರಿ ರಾಮ ಪೆರುವಾಜೆ ಉಪಸ್ಥಿತರಿದ್ದರು. ಅಭಿನಂದನಾ ಗ್ರಂಥ ಸಂಪಾದಕ ಡಾ.ಮುರಲೀ ಮೋಹನ್ ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಅಧ್ಯಕ್ಷ ಮಹೇಶ್ ಚೂಂತಾರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ವಂದಿಸಿದರು. ಪ್ರಕಾಶ್ ಮೂಡಿತ್ತಾಯ ನಿರೂಪಿಸಿದರು.