ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿರುವ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ತೊರೆಯುವುದಿಲ್ಲ. ಸಚಿವ ಸ್ಥಾನಕ್ಕೆ
ಮಾತ್ರ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.ಡಿ.ಕೆ. ಶಿವಕುಮಾರ್ ಸಂಪುಟ ಸೇರಿರುವ 13 ಸಚಿವರು ಮೊನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದರು. ಗುರುವಾರ ಖಾತೆ ಹಂಚಿಕೆಯಾಗಿತ್ತು. ಅದರ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ.
ಸಿಎಂಗೆ ಬರೆದಿರುವ ಪತ್ರದಲ್ಲಿ, ‘ತಮ್ಮ ಸಚಿವ ಸಂಪುಟದಲ್ಲಿ ಸ್ಥಾನಾ ನೀಡಿದ್ದಕ್ಕೆ ತಮಗೂ, ಕಾಂಗ್ರೆಸ್ ಪಕ್ಷಕ್ಕೂ ಧನ್ಯವಾದಗಳು. ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ‘ ಎಂದು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆ ದೊರೆಯದ ಕಾರಣ ಅಸಮಾಧಾನಗೊಂಡು ಅವರು ರಾಜಿನಾಮೆ ಸಲ್ಲಿಸಿದ್ದಾರೆ.













