ಪಂಜ:ಮಾಜಿ ಅರಣ್ಯ ಸಚಿವರಾದ ಬಿ.ರಮಾನಾಥ ರೈ ಅವರು ಡಿ.17ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಪವಿತ್ರಾ ಮಲ್ಲೆಟ್ಟಿ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ ಉಪಸ್ಥಿತರಿದ್ದು ಸ್ವಾಗತಿಸಿದರು. ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪಿ.ಎಸ್.ಗಂಗಾಧರ, ಅಬ್ದುಲ್ ಗಫೂರ್ ಕಲ್ಮಡ್ಕ, ಸಚಿನ್ ರಾಜ್ ಶೆಟ್ಟಿ, ಲಕ್ಷ್ಮಣ ಬೊಳ್ಳಾಜೆ , ಕುಸುಮಾಧರ ಮತ್ತಿತರರು ಉಪಸ್ಥಿತರಿದ್ದರು.













