ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ‘ಸಮರವೀರ ಕೆದಂಬಾಡಿ ರಾಮಯ್ಯ ಗೌಡ್ರ ನೆಂಪುನ ಜಂಬರ’ ಕಾರ್ಯಕ್ರಮ ಮಾರ್ಚ್ 31ರಂದು ಉಬರಡ್ಕ ಮಿತ್ತೂರು ಗ್ರಾಮದ ಅಮೈ ಮಡಿಯಾರು ಸ.ಹಿ.ಪ್ರಾ ಶಾಲೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಿವೃತ್ತ ಸೈನಿಕರಾದ ಅಡ್ಡಂತ್ತಡ್ಕ ದೇರಣ್ಣ ಗೌಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲತಾ ಕುತ್ಪಾಜೆ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ. ಎಸ್.ಗಂಗಾಧರ, ಸುರೇಶ್ ಎಂ.ಎಚ್ ಮತ್ತಿತರರು ಉಪಸ್ಥಿತರಿದ್ದರು. ದೇರಣ್ಣ ಗೌಡರನ್ನು ಸದಾನಂದ ಮಾವಜಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಮಾ.31ರಂದು ನಡೆಯುವ ನೆಂಪುನ ಜಂಬರ ಕಾರ್ಯಕ್ರಮವನ್ನು ಮಿತ್ತೂರು ಉಳ್ಳಾಕುಲು ನಾಯರ್ ದೈವಸ್ಥಾನದ ಆಡಳಿತ ಮೊಕ್ತೇಸರರಾದ ವೆಂಕಟ್ರಮಣ ಗೌಡ ಕೆದಂಬಾಡಿ ಉದ್ಘಾಟಿಸಲಿದ್ದಾರೆ. ಉಪನ್ಯಾಸಕ ಅರವಿಂದ ಚೊಕ್ಕಾಡಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷೆ ಚಿತ್ರಾ ಪಾಲಡ್ಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಪ್ರಮುಖರಾದ ದಾಮೋದರ ಗೌಡ ಮದುವೆಗದ್ದೆ, ಕಿರಣ್ ಬುಡ್ಲೆಗುತ್ತು, ಸುರೇಶ್ ಎಂ. ಎಚ್, ಲೋಕೇಶ್ ಕೋಟ್ಯಾನ್, ವಿದ್ಯಾದರ ಹರ್ಲಡ್ಕ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.