ಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪಿಸಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾಯ೯ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಯಿತು. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ
ಸಮಿತಿಯ ಪದಾಧಿಕಾರಿಗಳು ಸಂಸದ ನಳಿನ್ಕುಮಾರ್ ಕಟೀಲ್ ಅವರ ಮುಖಾಂತರ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಯಿತು. ನ.19 ರಂದು ಲೋಕಾರ್ಪಣೆಗೆ ದಿನ ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರಾದ ಪುತ್ತೂರು ಶಾಸಕ ಸಂಜೀವ ಮಠಂದೂರು, ಸಮಿತಿಯ ಸದಸ್ಯರ ಭಾಸ್ಕರ್ ದೇವಸ್ಯ, ಅಕ್ಷಯ್ ಕುರುಂಜಿ, ಸಮಿತಿಯ ಬೆಂಗಳೂರು ಮಡಿಕೇರಿ ಪ್ರಧಾನ ಸಂಚಾಲಕ ತೇನನ ರಾಜೇಶ್ ಸೋಮಣ್ಣ, ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು , ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ರಜತ್ ಅಡ್ಕಾರ್ ಉಪಸ್ಥಿತರಿದ್ದರು.