ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು.
ಶಾಸಕಿ ಭಾಗೀರಥಿ ಮುರುಳ್ಯ ದೀಪಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ರೈತರ ಪರವಾಗಿ ಹೋರಾಟ ಮಾಡಿದ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ನಿರ್ಮಾಣ ಆಗಬೇಕು. ಬೆಳ್ಳಾರೆ ಬಂಗ್ಲೆಗುಡ್ಡೆಯು
ಐತಿಹಾಸಿಕ ಸ್ಮಾರಕವಾಗಬೇಕು ಈ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು ಎಂದು ಅವರು ಹೇಳಿದರು.
ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಪ್ರಸನ್ನ ನಿಡ್ಯಮಲೆ ಉಪನ್ಯಾಸ ನೀಡಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲು ನಡೆದ ಹೋರಾಟ ರೈತರಿಗೆ ಆದ ಅನ್ಯಾಯದ ವಿರುದ್ಧ ನಡೆದ ಹೋರಾಟ. ಆಗ ಆ ಹೋರಾಟಕ್ಕೆ ರಾಷ್ಟ್ರೀಯ ಕಲ್ಪನೆ ಇರಲಿಲ್ಲ.ಆದರೂ ಹಿರಿಯರ ತ್ಯಾಗ ಬಲಿದಾನಗಳ ಫಲವಾಗಿ ನಾವು ಇಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಆದುದರಿಂದ ಕೆದಂಬಾಡಿ ರಾಮಯ್ಯ ಗೌಡರಂತಹಾ ನಾಯಕರನ್ನು ಸದಾ ಸ್ಮರಿಸುವಂತಾಗಬೇಕು. ಅದಕ್ಕಾಗಿ

ಚಿತ್ರ:ಪ್ರೇಮ್ ಸ್ಟುಡಿಯೋ ಬೆಳ್ಳಾರೆ
ಅವರ ಸ್ಮಾರಕ ನಿರ್ಮಾಣ ಆಗಬೇಕು ಎಂದು ಹೇಳಿದರು.
ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿ ಮಾತನಾಡಿ’ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣೆ ಪ್ರತಿ ವರ್ಷ ಆಚರಿಸುವಂತಾಗಬೇಕು. ಬಂಗ್ಲೆಗುಡ್ಡೆಯನ್ನು ಐತಿಹಾಸಿಕ ಸ್ಮಾರಕವಾಗಿ ಮಾಡಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ತರಬೇಕಾದ ಅಗತ್ಯತೆಯಿದೆ. ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ಆದರೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಮಾಡಲು ಸಾಧ್ಯವಿದೆ. ಬಂಗ್ಲೆಗುಡ್ಡೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಅರೆಭಾಷೆ ಅಕಾಡೆಮಿ ಎಲ್ಲಾ ಪ್ರಯತ್ನ ನಡೆಸುತಿದೆ ಎಂದು ಹೇಳಿದರು. ಎಲ್ಲಾ ಸದಸ್ಯರ ಸಹಕಾರದಿಂದ ಅಕಾಡೆಮಿ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಬೆಳ್ಳಾರೆ ಗ್ರಾ.ಪಂ. ಆಡಳಿತಾಧಿಕಾರಿ, ಜಿ.ಪಂ. ಎ.ಇ.ಇ. ಎಂ.ಎಂ.ಫಯಾಜ್ ಅಹ್ಮದ್, ಬೆಳ್ಳಾರೆ ಪೋಲೀಸ್ ಉಪನಿರೀಕ್ಷಕ ಈರಯ್ಯ ದೂಂತೂರು,ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ, ಬೆಳ್ಳಾರೆ ಪ್ರಾಥಮಿಕ
ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲು, ಅಮರ ಸುಳ್ಯ ಸಮರ ತಾಲೂಕು ಸಮಿತಿ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಸುಬ್ರಹ್ಮಣ್ಯ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ರಾಜೀವಿ ಆರ್.ರೈ, ಪ್ರಮುಖರಾದ ಕಾಮದೇನು ಮಾಧವ ಗೌಡ, ಮುಗುಪ್ಪು ಕೂಸಪ್ಪ ಗೌಡ, ಬೆಳ್ಳಾರೆ ಗ್ರಾಮ ಗೌಡ ಸಂಘದ ಅಧ್ಯಕ್ಷ ಐತ್ತಪ್ಪ ಗೌಡ, ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ ಭಾಗವಹಿಸಿದ್ದರು.
ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು,ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಸಂದೀಪ್ ಪೂಳಕಂಡ ಉಪಸ್ಥಿತರಿದ್ದರು. ಸವಿತಾ ಸಂದೇಶ್ ಆಶಯ ಗೀತೆ ಹಾಡಿದರು.ಬೆಳ್ಳಾರೆ ಕೆಪಿಎಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.ಕಾರ್ಯಕ್ರಮ ಸದಸ್ಯ ಸಂಚಾಲಕರಾದ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿ, ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ, ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮೊದಲು ಬೆಳ್ಳಾರೆ ಅಂಬೇಡ್ಕರ್ ಭವನದ ಮುಂಭಾಗದಿಂದ ಬಂಗ್ಲೆಗುಡ್ಟೆ ತನಕ ಮೆರವಣಿಗೆ ನಡೆಯಿತು
ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಬಂಗ್ಲೆಗುಡ್ಡೆಯಲ್ಲಿ ಆಗಮಿಸಿದ ಬಳಿಕ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.










