ಹೈದರಾಬಾದ್: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯಕ್ಕೊಳಗಾಗಿದ್ದ
ರಾಮೋಜಿ ರಾವ್ ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸೂಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ರಾಮೋಜಿ ರಾವ್ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ.