ಬೆಳ್ಳಾರೆ: ಅಭಿನಯ ಕೌಶಲ್ಯವಿದ್ದಾಗ ಪರಿಣಾಮಕಾರಿ ಭೋದನೆ ಸಾಧ್ಯ ಎಂದು ಚಲನ ಚಿತ್ರ ನಟ, ನಿರ್ದೇಶಕ ಮೋಹನ್ ಶೇಣಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ನಡೆದ ಎರಡು ದಿನಗಳ
ರಂಗ ಚಟುವಟಿಕೆ ಕಾರ್ಯಾಗಾರವನ್ನು ಉದ್ಘಾಟಿಸಿ ತರಬೇತಿ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಚ್ಚುತ ಅಟ್ಲುರು ಅಧ್ಯಕ್ಷತೆ ವಹಿಸಿದ್ದರು. ನಟ, ರಂಗ ನಿರ್ದೇಶಕ ಉದಯ ಸಾರಂಗ್ ಮತ್ತು ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರಂಗಭೂಮಿಯ ವಿವಿಧ ಆಯಾಮಗಳ ಬಗ್ಗೆ ವಿದ್ಯಾರ್ಥಿ ಶಿಕ್ಷಕಿಯರಿಗೆ ತರಬೇತಿ ನೀಡಿದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ವಿದ್ಯಾರ್ಥಿ ಶಿಕ್ಷಕಿ ರಂಜಿತಾ ವಂದಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಮೋಹನ್ ಶೇಣಿ ಅವರನ್ನು ಸನ್ಮಾನಿಸಲಾಯಿತು.