ಸುಳ್ಯ:ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ & ರೇಂಜರ್ಸ್ ಮತ್ತು ರೆಡ್ ಕ್ರಾಸ್ ಘಟಕದ 2025-26 ನೇ ಸಾಲಿನ 3 ದಿನಗಳ ವಿಶೇಷ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಶಿಬಿರವನ್ನು
ಉದ್ಘಾಟಿಸಿದರು. ಕಾಲೇಜಿನ ಕ್ಷೇಮಪಾಲನಾಧಿಕಾರಿ ಸತೀಶ್ ಕುಮಾರ್ ಕೆ.ಆರ್.ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಶಿವಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ ಸಂಚಾಲಕಿ ಹಾಗೂ ರೇಂಜರ್ಸ್ ಲೀಡರ್ ಡಾ. ಪ್ರೀತಿ ಕೆ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಶೈಲಜಾ, ರೆಡ್ ಕ್ರಾಸ್ ಘಟಕ ಸಂಚಾಲಕ ಪ್ರೊ.ಭಾಸ್ಕರ, ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರೊ. ಶಿವಾನಂದ, ವೇದಿಕೆಯಲ್ಲಿ ಉಪಸ್ಥಿತರಿದ್ದರು.






