ಸುಳ್ಯ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿದ್ದು ಹಿರಿಯ ಸಹಾಯಕ ನಿರ್ದೇಶಕರಾಗಿ ಪದೋನ್ನತಿಗೊಂಡ ರಶ್ಮಿ ಅಶೋಕ್ ನೆಕ್ರಾಜೆಯವರಿಗೆ ಸಿಡಿಪಿಒ ಕಚೇರಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಜು.15 ರಂದು ಸುಳ್ಯದ
ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ರಶ್ಮಿ- ಆಶೋಕ್ ನೆಕ್ರಾಜೆ ದಂಪತಿಗಳನ್ಬು ಸನ್ಮಾನಿಸಿದರು. ರಶ್ಮಿಯವರ ಪತಿ ಅಶೋಕ್ ನೆಕ್ರಾಜೆಯವರ ಹುಟ್ಟುಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಲಾಯಿತು.
ಸುಳ್ಯ ತಾಲೂಕು ಪಶು ವೈದ್ಯಕೀಯ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ.ನಿತೀನ್ ಪ್ರಭು, ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್ ಎನ್, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸುಳ್ಯದ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಹರಿಣಿ ಸದಾಶಿವ ವೇದಿಕೆಯಲ್ಲಿದ್ದರು.ಮೇಲ್ವಿಚಾರಕಿ ವಿಜಯ ಪ್ರಾರ್ಥಿಸಿದರು.ರಶ್ಮಿಯವರನ್ನು ಪೂಜಾ ಪರಿಚಯಿಸಿದರು
ಮೇಲ್ವಿಚಾರಕಿ ದೀಪಿಕಾ ಸ್ವಾಗತಿಸಿದರು. ರವೀಶ್ರೀ ಕಾರ್ಯಕ್ರಮ ನಿರೂಪಿಸಿದರು.