ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡ ರಾತ್ರಿ ಇಲ್ಲಿ . ಅವರಿಗೆ 86 ವರ್ಷ ವಯಸ್ಸಾಗಿತ್ತು.
ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ
ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಬ್ರೀಚ್ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11.30 ಗಂಟೆಗೆ ಅವರು ನಿಧನರಾದರು.
‘ರತನ್ ಟಾಟಾ ಅವರು ಇನ್ನಿಲ್ಲ’ ಎಂದು ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಎನ್.ಚಂದ್ರಶೇಖರನ್ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಹಾಗೂ ಹಲವು ಉದ್ಯಮ ಕ್ಷೇತ್ರದ ಹಲವು ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ರತನ್ ಟಾಟಾ ಸುಮಾರು 20 ವರ್ಷ ಕಾಲ ಟಾಟಾ ಸನ್ಸ್ ಸಂಸ್ಥೆಯನ್ನು ಮುನ್ನಡೆಸಿದ್ದರು. ಅಲ್ಲದೆ, ದೇಶದ ಉದ್ಯಮದ ವಿವಿಧ ಕ್ಷೇತ್ರಗಳಲ್ಲಿ ಕಂಪನಿಯ ಬಾಹುವನಿನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಸಂಖ್ಯ ಸಿಬ್ಬಂದಿಗೆ ಪ್ರೇರಕಶಕ್ತಿಯಾಗಿದ್ದರು. ದೇಶಿ ಉತ್ಪಾದನೆಗೆ ಮೆರಗು, ಖ್ಯಾತಿಯನ್ನು ನೀಡಿದ್ದರು. ಟಾಟಾ ಸಂಸ್ಥೆ ಇಂದು ವಿಶ್ವದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿ ಖ್ಯಾತಿ ಪಡೆಯುವಲ್ಲಿ ರತನ್ ಟಾಟಾ ದೊಡ್ಡ ಕೊಡುಗೆ ನೀಡಿದ್ದರು.