ಬೆಂಗಳೂರು:ಫೆ.16ರಂದು ತೆರೆ ಕಾಣಲಿರುವ ಬಹು ನಿರೀಕ್ಷಿತ “ರವಿಕೆಪ್ರಸಂಗ ” ಚಿತ್ರದ ಪ್ರಮೋಷನ್ನ ಭಾಗವಾಗಿ ಚಿತ್ರ ತಂಡ ಮಹಿಳಾ ಪ್ರೇಕ್ಷಕರಿಗಾಗಿ ಭರ್ಜರಿ ಬಂಪರ್ ಆಫರ್ ಘೋಷಿಸಿದೆ. ನಿಮ್ಮ ಮೆಚ್ಚಿನ ಡಿಸೈನರ್ ಬ್ಲೌಸ್ಗಳೊಂದಿಗೆ 5 ಫೋಟೋಗಳನ್ನು ಈ ಕೂಡಲೇ “6366950230” ನಂಬರಿಗೆ ವಾಟ್ಸಾಪ್ ಮೂಲಕ ಕಳುಹಿಸಿ.ಗೀತಾ ಭಾರತಿ ಭಟ್ ಹಾಗೂ ಚಿತ್ರ ತಂಡದೊಂದಿಗೆ ಫೆಬ್ರವರಿ 16ರಂದು ಬಿಡುಗಡೆಯಾಗಲಿರುವ “ರವಿಕೆ ಪ್ರಸಂಗ” ಚಿತ್ರದ Special Show ನ
ಟಿಕೆಟ್ ಗೆದ್ದು, ಕುಟುಂಬ ಸಮೇತ ಸಿನಿಮಾ ನೋಡಿ, ಆನಂದಿಸಬಹುದು. ಜೊತೆಗೆ ಒಂದು ಆಕರ್ಷಕ ಉಡುಗೊರೆ ಪಡೆಯಬಹುದು.ಈ ಸ್ಪರ್ಧೆ ಫೆಬ್ರವರಿ 10 ರಂದು ಮುಗಿಯಲಿದ್ದು, ಫೆಬ್ರವರಿ 11ಕ್ಕೆ ವಿಜೇತರನ್ನು ಘೋಷಿಸಲಾಗುವುದು ಎಂದು ಚಿತ್ರದ ನಿರ್ದೇಶಕ ಸಂತೋಷ್ ಕೊಡೆಂಕೇರಿ ತಿಳಿಸಿದ್ದಾರೆ. ತಾಲೂಕು, ಜಿಲ್ಲಾಮಟ್ಟದ ಪ್ರತಿಯೊಬ್ಬ ವಿನ್ನರ್ ಗೆ ಫ್ಯಾಮಿಲಿ ಟಿಕೆಟ್ ಫ್ರೀ ದೊರೆಯಲಿದೆ “ಇನ್ನೇಕೆ ತಡ ಈಗಲೇ ಫೋಟೋ ತೆಗೆಯಿರಿ ಉಚಿತ ಟಿಕೆಟ್ ಪಡೆಯಿರಿ”

ಫೆ.16ರಂದು ಚಿತ್ರ ರಿಲೀಸ್:
ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿ ಭಾರೀ ಮೆಚ್ಚುಗೆ ಗಳಿಸಿದೆ. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ
ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ರವಿಕೆಪ್ರಸಂಗ ಫೆಬ್ರವರಿ 16 ರಂದು ತೆರೆಕಾಣಲಿದೆ ಎಂದು ನಿರ್ದೇಶಕ ಸಂತೋಷ್ ಕೊಡೆಂಕೇರಿ ತಿಳಿಸಿದ್ದಾರೆ. ‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ.

ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ.
ಝೇಂಕಾರ್ ಮ್ಯೂಸಿಕ್ ಚಿತ್ರದ ಆಡಿಯೋ ರೈಟ್ಸ್ ಪಡೆದಿದೆ. ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ.
ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ

ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮುಖ್ಯವಾಗಿ ಸುಳ್ಯ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಬಹಳ ಕುತೂಹಲವಿದೆ.ಫೆಬ್ರವರಿ 16 ರಂದು ರವಿಕೆಪ್ರಸಂಗ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಸಂತೋಷ್ ಕೊಡೆಂಕೇರಿ ತಿಳಿಸಿದ್ದಾರೆ.










