ಸುಳ್ಯ; ಸಂತೋಷ್ ಕೊಡೆಂಕಿರಿ ನಿರ್ದೇಶನದ ವಿಭಿನ್ನ ಕಥೆಯನ್ನು ಹೊಂದಿರುವ ಫ್ಯಾಮಿಲಿ ಎಂಟರ್ಟೈನರ್ ಚಿತ್ರ ರವಿಕೆ ಪ್ರಸಂಗ ಸಿನಿಮಾದ ಬಿಡುಗಡೆ ಫೆ.16 ರಂದು ನಡೆಯಲಿದೆ. ಇದರ ಪ್ರಚಾರಾರ್ಥ ಅಟೋರಿಕ್ಷಾಗಳಿಗೆ ಪೋಸ್ಟರ್ ಅಂಟಿಸುವ ಅಭಿಯಾನ ಇಂದು ಸುಳ್ಯದ ಸದರ್ನ್ ರೆಸಿಡೆನ್ಸಿ ಹೋಟೆಲ್ ಬಳಿಯಲ್ಲಿ ನಡೆಯಿತು.ಸುಳ್ಯದ
ಅಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಅವರು ರಿಕ್ಷಾಗಳಿಗೆ ಪೋಸ್ಟರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ರವಿಕೆ ಪ್ರಸಂಗ ಸಿನಿಮಾ ನಿರ್ದೇಶಕ ಸಂತೋಷ್ ಕೊಡೆಂಕಿರಿ, ಚಿತ್ರದ ಕಥೆ ಸಂಭಾಷಣೆ ರಚಿಸಿದ ಪಾವನಾ ಸಂತೋಷ್, ನ.ಪಂ. ಸದಸ್ಯ ಹಾಗೂ ದೃಷ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕಿರಿ, ನ.ಪಂ.ಸದಸ್ಯೆ ಶಿಲ್ಪಾ ಸುದೇವ್, ಸುಮತಿ ಜಯನಗರ, ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸುಳ್ಯದ ವಿವಿಧ ಕಡೆಗಳಲ್ಲಿ ಅಟೋ ರಿಕ್ಷಾಗಳಿಗೆ ಪೋಸ್ಟರ್ ಅಂಟಿಸಿ ಪ್ರಚಾರ ನಡೆಸಲಾಗುವುದು.










