ಸುಳ್ಯ:ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ರಾಯರ 353 ನೇ ವರ್ಷದ ಆರಾಧನಾ ಮಹೋತ್ಸವದ ಅಂಗವಾಗಿ ಆ.21ರಂದು ವಿವಿಧ ಕಾರ್ಯಕ್ರಮಗಳು ನಡೆಯುತಿದೆ. ಬೆಳಿಗ್ಗಿನಿಂದ ಗಣಪತಿ ಹವನ ,ಪವಮಾನ ಹೋಮ, ಪವಮಾನ ಅಭಿಷೇಕ, ಬ್ರಾಹ್ಮಣಾರಾಧನೆ, ಮಹಾಪೂಜೆ ಮತ್ತಿತರ ಕಾರ್ಯಕ್ರಮಗಳು ನಡೆಯಿತು. ಸಂಜೆ 4 ರಿಂದ
ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 5 ರಿಂದ ಪಲ್ಲಕ್ಕಿ ಸೇವೆ, ತೊಟ್ಟಿಲು ಸೇವೆ, ಅಷ್ಟಾವಧಾನ ಸೇವೆಯು ವಿಜೃಂಭಣೆಯಿಂದ ನಡೆಯಲಿದೆ. ರಾತ್ರಿ ಮಹಾಪೂಜೆಯಾಗಿ ನಡೆದು ಪ್ರಸಾದ ವಿತರಣೆ , ಆರಾಧನಾ ಮಹೋತ್ಸವ ದ ಪ್ರಯುಕ್ತ ರಾತ್ರಿ ಅನ್ನ ಸಂತರ್ಪಣೆ ನಡೆಯಲಿರುವುದು. ಮಠದ ಪುರೋಹಿತರಾದ ಶ್ರೀಹರಿ ಎಳಚ್ಚಿತ್ತಾಯರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯುತಿದೆ.
ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ, ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳುಉಪಸ್ಥಿತರಿದ್ದರು.