ಸುಳ್ಯ: ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಯುವ ಸಂಘಟಕ ರವಿಚಂದ್ರ ಕೊಡಿಯಾಲಬೈಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಇಂದು ಬಿಜೆಪಿ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಧ್ವಜ ಹಸ್ತಾಂತರಿಸಿ ಬಿಜೆಪಿ ಸೇರ್ಪಡೆ ಮಾಡಿದರು.
ಈ ಸಂದರ್ಭದಲ್ಲಿ
ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ ಅಧ್ಯಕ್ಷ ಎಸ್.ಎನ್.ಮನ್ಮಥ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ.ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಬಿಜೆಪಿ ನಗರ ಶಕ್ತಿ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ,ನ.ಪಂ.ಸದಸ್ಯರಾದ ಬಾಲಕೃಷ್ಣ ರೈ, ಬುದ್ಧ ನಾಯ್ಕ್, ನಾರಾಯಣ ಶಾಂತಿನಗರ, ಶಶಿಕಲಾ ನೀರಬಿದಿರೆ, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಪ್ರವಿತಾ ಪ್ರಶಾಂತ್, ಶೀಲಾ ಅರುಣ ಕುರುಂಜಿ, ಕಿಶೋರಿ ಶೇಠ್, ಅರಂತೋಡು ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಪ್ರಮುಖರಾದ ಕೇಶವ ಮಾಸ್ತರ್,ಪ್ರದೀಪ್ ಕೊಲ್ಲರಮೂಲೆ, ಚಂದ್ರಶೇಖರ ನೆಡಿಲು, ಹೇಮಂತ ಮಠ ಮತ್ತಿತರರು ಉಪಸ್ಥಿತರಿದ್ದರು.









