ಹೈದರಾಬಾದ್: ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 35 ರನ್ಗಳ ಜಯ ದಾಖಲಿಸಿತು. ಈ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಆಡಿರುವ 9 ಪಂದ್ಯಗಳಲ್ಲಿ ಆರ್ಸಿಬಿ ಎರಡನೇ ಜಯ ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 206 ರನ್ ಪೇರಿಸಿತು. 207 ರನ್ಗಳ ಗೆಲುವಿನ ಗುರಿ ಬೆನ್ನಟ್ಟಿದ
ಎಸ್ಆರ್ಎಚ್ಗೆ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಮೊದಲ ಓವರ್ನಲ್ಲಿಯೇ ಆರ್ಸಿಬಿ ಬೌಲರ್ಗಳು ಆಘಾತ ನೀಡಿದರು. ಸ್ಟಾರ್ ಹಿಟ್ಟರ್ ಟ್ರಾವಿಸ್ ಹೆಡ್ 1 ರನ್ ಗಳಿಸಿ ಔಟ್ ಆದರು. ಬಳಿಕ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಪವರ್ ಪ್ಲೇ ಹಂತದಲ್ಲಿಯೇ 4 ವಿಕೆಟ್ ಕಳೆದುಕೊಂಡು ಹೈದ್ರಾಬಾದ್ ಸಂಕಷ್ಟಕ್ಕೆ ಸಿಲುಕಿತು. ಎಸ್ಆರ್ಎಚ್ ಪರ ಶಹಭಾಝ್ ಅಹಮ್ಮದ್ 37 ಎಸೆತಗಳಲ್ಲಿ ತಲಾ ಒಂದು ಬೌಂಡರಿ ಮತ್ತು ಸಿಕ್ಸರ್ ನೆರವಿನಿಂದ ಅಜೇಯ 40 ರನ್ ಗಳಿಸಿದರು. ಅಭಿಷೇಕ್ ಶರ್ಮ 13 ಎಸೆತಗಳಲ್ಲಿ 3 ಬೌಂಡರಿ, ಎರಡು ಸಿಕ್ಸರ್ ನೆರವಿನಿಂದ 31, ನಾಯಕ ಪ್ಯಾಟ್ ಕಮ್ಮಿನ್ಸ್ 15 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು. ಆರ್ಸಿಬಿ ಪರ ಸ್ವಪ್ನಿಲ್ ಸಿಂಗ್, ಕರಣ್ ಶರ್ಮ ಹಾಗೂ ಕ್ಯಾಮರೂನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರು.
ಟಾಸ್ ಗೆದ್ದು ಬೆಂಗಳೂರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್ಸಿಬಿ ಪರ ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 4 ಬೌಂಡರಿ ಒಂದು ಸಿಕ್ಸರ್ ನೆರವಿನಿಂದ 51, ರಜತ್ ಪಾಟೀದಾರ್ 20 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ನೆರವಿನಿಂದ 50, ಕ್ಯಾಮರೂನ್ ಗ್ರೀನ್ 20 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 35 ರನ್ ಹೊಡೆದರು. ಸನ್ರೈಸರ್ಸ್ ಹೈದರಾಬಾದ್ ಪರ ಉನದ್ಕಟ್ 3, ನಟರಾಜನ್ 2 ವಿಕೆಟ್ ಕಬಳಿಸಿದರು.