ಮುಂಬೈ: ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಪೇರಿಸಿ ಮುಂಬೈಗೆ 197 ರನ್ ಗುರಿ ನೀಡಿದೆ.
ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ
ಆರ್ಸಿಬಿಗೆ ದಿನೇಶ್ ಕಾರ್ತಿಕ್ ಸ್ಪೋಟಕ ಅರ್ಧ ಶತಕ, ನಾಯಕ ಪಾಫ್ ಡುಪ್ಲೆಸಿಸ್ ಹಾಗೂ ರಜತ್ ಪಾಟಿದಾರ್ ಆಕರ್ಷಕ ಅರ್ಧ ಶತಕ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾಯಿತು.
ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಚಚ್ಚಿದರು.
ಡುಪ್ಲಸಿ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 61 ರನ್, ಪಾಟಿದಾರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. ಮುಂಬೈ ಪರ ಬಿಗು ದಾಳಿ ಸಂಘಟಿಸಿದ ಜಸ್ಪೀತ್ ಬುಮ್ರಾ 4 ಓವರ್ಗಳಲ್ಲಿ 21 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು.