ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತ ನೈಟ್ ರೈಡರ್ಸ್ಗೆ 183 ರನ್ಗಳ ಗೆಲುವಿನ ಗುರಿ ನೀಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ
6 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟವಾಡಿ 59 ಎಸೆತಗಳಲ್ಲಿ ತಲಾ ನಾಲ್ಕು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 83 ರನ್ ಗಳಿಸಿ ಆಜೇಯರಾಗಿ ಉಳಿದರು. ಗ್ಲೆನ್ ಮ್ಯಾಕ್ಸ್ವೇಲ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹೀತ 28, ಕ್ಯಾಮರೂನ್ ಗ್ರೀನ್ 21 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹೀತ 33 ರನ್ ಗಳಿಸಿದರು. ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ 3 ಸಿಕ್ಸರ್ ನೆರವಿನಿಂದ ಅಜೇಯ 20 ರನ್ ಗಳಿಸಿ ತಂಡದ ಮೊತ್ತ ಏರಿಸಿದರು.ಕೋಲ್ಕತ್ತ ಪರ ಆಂಡ್ರೂ ರಸೆಲ್ ಹಾಗೂ ರಾಣ ತಲಾ 2 ವಿಕೆಟ್ ಪಡೆದರು.