ನವದೆಹಲಿ: ಆರ್ಸಿಬಿ ವಿರುದ್ಧದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರನ್ಗಳ ಸಾಧಾರಣ ಮೊತ್ತ ಕಲೆ ಹಾಕಿದೆ.ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಡೆಲ್ಲಿ ಉತ್ತಮ ಆರಂಭವನ್ನೇ ಪಡೆಯಿತು. ಅಭಿಷೇಕ್ ಪೊರೇಲ್ 28 ಮತ್ತು ಫಫ್ ಡುಪ್ಲೆಸಿ 22 ರನ್ ಸಿಡಿಸಿದರು. ಕರುಣ್ ನಾಯರ್ 4 ರನ್ಗೆ ಪೆವಿಲಿಯನ್ ಸೇರಿಕೊಂಡರು. ಉತ್ತಮವಾಗಿ
ಆಡಿದ ಕೆ.ಎಲ್. ರಾಹುಲ್ 41 ರನ್ಗಳ ಉಪಯುಕ್ತ ಕಾಣಿಕೆ ನೀಡಿದರು.ಒಂದು ಹಂತದಲ್ಲಿ 200ರ ಸಮೀಪಕ್ಕೆ ತಲುಪಬಹುದು ಎನ್ನುವಂತಿದ್ದ ರನ್ ಗತಿ ಆರ್ಸಿಬಿ ಬೌಲರ್ಗಳ ಶಿಸ್ತುಬದ್ಧ ಬೌಲಿಂಗ್ ಎದುರು ಕುಸಿಯಿತು. ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಡೆಲ್ಲಿ ತೀವ್ರ ಕುಸಿತ ಅನುಭವಿಸಿತು.ಅಂತ್ಯದಲ್ಲಿ ಅಬ್ಬರಿಸಿದ ಕ್ರಿಸ್ಟನ್ ಸ್ಟಬ್ಸ್ 18 ಎಸೆತಗಳಲ್ಲಿ 34 ರನ್ ಗಳಿಸುವ ಮೂಲಕ ಡೆಲ್ಲಿ 163 ರನ್ಗಳ ಗುರಿ ನೀಡಲು ನೆರವಾದರು.
ಆರ್ಸಿಬಿ ಪರ ಭುವನೇಶ್ವರ್ ಕುಮಾರ್ 33 ರನ್ ನೀಡಿ 3 ವಿಕೆಟ್ ಉರುಳಿಸಿದರೆ, ಹ್ಯಾಜಲ್ವುಡ್ 36 ರನ್ ನೀಡಿ 2 ವಿಕೆಟ್ ಪಡೆದರು.