ಹೈದರಾಬಾದ್: ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ 207 ರನ್ಗಳ ಗೆಲುವಿನ ಗುರಿ ನೀಡಿದೆ.ಇಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬೆಂಗಳೂರು ಟಾಸ್ ಗೆದ್ದು
ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.
ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 206 ರನ್ ಪೇರಿಸಿದೆ. ಬೆಂಗಳೂರು ಪರ ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 4 ಬೌಂಡರಿ ಒಂದು ಸಿಕ್ಸರ್ ನೆರವಿನಿಂದ 51, ರಜತ್ ಪಾಟೀದಾರ್ 20 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ನೆರವಿನಿಂದ 50, ಕ್ಯಾಮರೂನ್ ಗ್ರೀನ್ 20 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 35 ರನ್ ಹೊಡೆದರು. ಸನ್ರೈಸರ್ಸ್ ಹೈದರಾಬಾದ್ ಪರ ಉನದ್ಕಟ್ 3, ನಟರಾಜನ್ 2 ವಿಕೆಟ್ ಕಬಳಿಸಿದರು.