ಬೆಂಗಳೂರು: ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಆಟಗಾರ್ತಿಯರಿಗಾಗಿ ಜೆರ್ಸಿಯನ್ನು ಅನಾವರಣಗೊಳಿಸಿದೆ.
ಜೆರ್ಸಿ ಧರಿಸಿರುವ ಆಟಗಾರ್ತಿಯರ ಚಿತ್ರಗಳನ್ನು ಆರ್ಸಿಬಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಗುರುವಾರ ಹಂಚಿಕೊಂಡಿದೆ.ಚೊಚ್ಚಲ ಡಬ್ಲ್ಯುಪಿಎಲ್
ಆವೃತ್ತಿ ಮಾರ್ಚ್ 4 ರಂದು ಪ್ರಾರಂಭವಾಗಲಿದ್ದು, ಅಭಿಮಾನಿಗಳು ಕಾತರರಾಗಿದ್ದಾರೆ.ಲೀಗ್ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್ ಹರಾಜಿನಲ್ಲಿ 3.40 ಕೋಟಿಗೆ ಆರ್ಸಿಬಿ ತಂಡ ಸೇರಿದ್ದರು.ಮುಂಬೈನ ಈ ಆರಂಭಿಕ ಆಟಗಾರ್ತಿ ಭಾರತೀಯ ಮಹಿಳಾ ರಾಷ್ಟ್ರೀಯ ತಂಡದ ಉಪನಾಯಕಿ ಕೂಡ. ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ತಂಡಕ್ಕೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ತನ್ನ ಮೆಂಟರ್ ಆಗಿ ಆರ್ಸಿಬಿ ನೇಮಿಸಿಕೊಂಡಿದೆ. ಆಸ್ಟ್ರೇಲಿಯಾದ ಬೆನ್ ಸಾಯರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.