ಮಂಗಳೂರು: ಸೋಮವಾರ ಬೆಳಗ್ಗಿನಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.ಈ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜು.24ರಂದು ಮತ್ತು 25 ಬೆಳಿಗ್ಗೆ 8.30ರ ತನಕ ಭಾರೀ ಮಳೆ ಮುಂದುವರಿಯುವ ಸೂಚನೆ ಇದ್ದು ಹವಾಮಾನ ಇಲಾಖಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಕತ್ತಲು ಕವಿದಿದ್ದು ಕುಂಭದ್ರೋಣ ಮಳೆ ಸುರಿಯುತಿದೆ.