ಮಂಗಳೂರು: ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದಮಂಗಳೂರಿನ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಲಾಯಿತು. ಕೆಂಪು ಕಲ್ಲು, ಮರಳು, ಖಾಲಿ ಚಟ್ಟಿ, ಗಾರೆಗಳನ್ನು ಪ್ರದರ್ಶಿಸಿಸಿ ಪ್ರತಿಭಟಿಸಲಾಯಿತು.
ಪ್ರತಿಭಟನಾ ಧರಣಿಯಲ್ಲಿ
ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ,
ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ,
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು.
ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜಾ, ಭಾಗೀರಥಿ, ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಕ್ಯಾ.ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ, ಸಂಜಯ ಪ್ರಭು, ರಮೇಶ್ ಕಂಡೆಟ್ಟು, ಪೂರ್ಣಿಮಾ, ವಿಹಿಂಪ ಮುಖಂಡ ಪುರುಷೋತ್ತಮ, ಮತ್ತಿತರರಿದ್ದರು.





