ಕೋಲ್ಕತಾ :‘ರೆಮೆಲ್’ ಚಂಡಮಾರುತ ತೀರಕ್ಕೆ ಅಪ್ಪಳಿಸಿದೆ. ಚಂಡಮಾರುತವು ಪಶ್ಚಿಮ ಬಂಗಾಳ ಕರಾವಳಿ ಪ್ರದೇಶವನ್ನು ತೀವ್ರವಾಗಿ ಬಾಧಿಸಿದೆ. ಚಂಡ ಮಾರುತದಿಂದ ಉತ್ತರದಲ್ಲಿ ಭಾರೀ ಮಳೆಯಾಗಿದೆ.
ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೇಪುಪಾರದ ನಡುವೆ ತೀರಕ್ಕೆ ಅಪ್ಪಳಿಸಿದೆ.ಇದರಿಂದ ಪ್ರತಿಕೂಲ ಹವಾಮಾನ ಉಂಟಾಗಿದೆ. ಚಂಡಮಾರುತವು ಕೆಲವು ಸ್ಥಳಗಳಲ್ಲಿ
ಗಂಟೆಗೆ 120 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ನೆಲಕ್ಕೆ ಅಪ್ಪಳಿಸಿದೆ ಮತ್ತು ನೂರಾರು ಗ್ರಾಮಗಳು ಜಲಾವೃತವಾಗಿವೆ. ಬಳಿಕ, ಚಂಡಮಾರುತವು ದುರ್ಬಲಗೊಂಡಿದ್ದು, ಗಂಟೆಗೆ 80ರಿಂದ 90 ಕಿ.ಮೀ. ವೇಗದ ಗಾಳಿಯೊಂದಿಗೆ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಕೋಲ್ಕತ್ತದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಬೇಕಿದ್ದ 8 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನದಿಂದ 21 ಗಂಟೆಗಳ ಕಾಲ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಚಂಡಮಾರುತದ ತೀವ್ರತೆ ತುಸು ಕಡಿಮೆಯಾದ ಕಾರಣ ವಿಮಾನ ಸೇವೆಗಳು ಪುನರಾರಂಭಗೊಂಡಿವೆ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಕೋಲ್ಕತ್ತದಲ್ಲಿ ಇಳಿಯಬೇಕಿದ್ದ ಕನಿಷ್ಠ ಎಂಟು ವಿಮಾನಗಳನ್ನು ಬೇರೆ ನಗರಗಳಿಗೆ ಕಳುಹಿಸಲಾಯಿತು ಎಂದು ಅವರು ಹೇಳಿದ್ದಾರೆ.
ರೆಮಲ್’ ಚಂಡಮಾರುತ ಪರಿಣಾಮ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಬಾಂಗ್ಲಾದೇಶದಲ್ಲಿ 10, ಪಶ್ಚಿಮ ಬಂಗಾಳದಲ್ಲಿ 6 ಮಂದಿ ಸಾವು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.