ಬೆಳ್ಳಾರೆ: 75 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೆಪಿಎಸ್ ಬೆಳ್ಳಾರೆ ಪ್ರಾಥಮಿಕ ವಿಭಾಗದಲ್ಲಿ ಆಚರಿಸಲಾಯಿತು. ಕಟ್ಟಡ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷ ಜೋಗಿಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ, ಧ್ವಜವಂದನೆ ,ಅಂಬೇಡ್ಕರ್ ಹಾಗೂ ಗಾಂಧೀಜಿಯವರ ಭಾವಚಿತ್ರಕ್ಕೆ
ಪುಷ್ಪ ನಮನ ನಡೆಯಿತು. ಮಕ್ಕಳಿಂದ ಶಿಸ್ತುಬದ್ಧ ಕವಾಯತು, ಡಂಬೆಲ್ಸ್, ಏರೋಬಿಕ್ ಪ್ರದರ್ಶನಗಳು ಮನಸೂರೆಗೊಂಡಿತು. ಇನ್ಸಪೈರ್ ಅವಾರ್ಡ್, ದತ್ತಿನಿಧಿ ಪ್ರಶಸ್ತಿಗಳನ್ನು ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿ ಪುರಸ್ಕರಿಸಲಾಯಿತು. ಮುಖ್ಯ ಶಿಕ್ಷಕರಾದ ಮಾಯಿಲಪ್ಪ ಮಾತನಾಡಿದರು. ಶಿಕ್ಷಕಿ ಅನ್ನಪೂರ್ಣ ಸ್ವಾಗತಿಸಿದರು. ಶಿಕ್ಷಕಿ ಸೌಮ್ಯ ವಂದಿಸಿದರು. ಶಿಕ್ಷಕಿ ಸುಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ತಾಯಂದಿರ ಸಮಿತಿಯ ಅಧ್ಯಕ್ಷೆ ಪ್ರಿಯಾಂಕ, ಪೋಷಕರ ಪ್ರತಿನಿಧಿ ವಿಜಯಲಕ್ಷ್ಮಿ, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು ಕಾರ್ಯಕ್ರಮದಲ್ಲಿ ಭಾಗಿಯಾದರು.









