ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಬಾಳಿಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕೆವಿಜಿ ಐಪಿಎಸ್ ನ

ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಸ್ವಾಗತಿಸಿ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್, ಕಮಿಟಿ ‘ಬಿ ‘ವಿಭಾಗದ ನಿರ್ದೇಶಕಿ ಡಾ. ಅಭಿಜ್ಞ ಕೆ ಆರ್, ಕೆವಿಜಿ ಡೆಂಟಲ್ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಮೌರ್ಯ ಆರ್ ಕುರುಂಜಿ, ಕೆವಿಜಿ ಐಪಿಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಅಮರ ಜ್ಯೋತಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ದೀಪಕ್ ವೈ ಆರ್, ಕೆವಿಜಿ ಐಟಿಐ ಕಾಲೇಜಿನ ಉಪ ಪ್ರಾಂಶುಪಾಲ ದಿನೇಶ್ ಮಡ್ತಿಲ ಮತ್ತು ಕೆವಿಜಿ ಐಪಿಎಸ್, ಕೆವಿಜಿ ಐಟಿಐ, ಅಮರ ಜ್ಯೋತಿ ಪಿಯು ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.