ಸುಳ್ಯ:ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರೊಸ್ತೊಂಡಾಂಟಿಕ್ಸ್ ವಿಭಾಗದ ಎಡರನೇ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕಿ ಡಾ.ವಜಿದಾ ಬಾನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ೨೦೨೫ ರ ನಡೆಯುವ ಗಣರಾಜ್ಯೋತ್ಸವ ಪಥಸಂಚಲನದ
ಕಮಾಂಡರ್ ಇನ್ ಚೀಫ್ ಆಗಿ ಆಯ್ಕೆಯಾಗಿದ್ದಾರೆ. ಇವರು ೨೦೨೩ರ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಮಿಟಿ “ಬಿ” ಅಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಕಾರ್ಯದರ್ಶಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲರಾದ ಡಾ. ಮೋಕ್ಷಾ ನಾಯಕ್ ಮತ್ತು ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು, ಎಲ್ಲಾ ವಿಭಾಗ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.