ಸುಳ್ಯ:ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ

ಗಣರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಸ್ವಾಗತಿಸಿ, ಮುಖ್ಯೋಪಾಧ್ಯಾಯನಿ ಭಾರತಿ ಪಿ ವಂದಿಸಿದರು. ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ ವೃಂದ ಹಾಗು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.