ಸುಳ್ಯ: ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶಯದಲ್ಲಿ ಸುಳ್ಯ ತಾಲೂಕು ಮಟ್ಟದ ಗಣರಾಜ್ಯೋತ್ಸವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.ಸುಳ್ಯ ತಹಸಿಲ್ದಾರ್ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿ ಗೌರವಂದನೆ ಸ್ವೀಕರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಈ ಸಂದರ್ಭದಲ್ಲಿ
ಆಕರ್ಷಕ ಗಣರಾಜ್ಯೋತ್ಸವ ಪಥಸಂಚಲನ ನಡೆಯಿತು. ಪೊಲೀಸ್, ಮಾಜಿ ಸೈನಿಕರ ಸಂಘ, ಗೃಹಹ ರಕ್ಷಕ ದಳ ಎನ್ಸಿಸಿ, ಸ್ಕೌಟ್ಸ್ & ಗೈಡ್ಸ್, ಬುಲ್ ಬುಲ್ಸ್ ತಂಡಗಳು ಹಾಗೂ ಶಾಲಾ ಮಕ್ಕಳು ಪಥ ಸಂಚಲನದಲ್ಲಿ ಭಾಗವಹಿಸಿದರು. ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ತಾಲೂಕು ಪಂಚಾಯತ್

ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ನಗರ ಪಂಚಾಯತ್ ಸದಸ್ಯರಾದ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ರಾಜು ಪಂಡಿತ್, ಮಾಜಿ ಸದಸ್ಯ ಕೆ.ಎಂ.ಮುಸ್ತಫ,ಡಾ. ನಿತಿನ್ ಪ್ರಭು, ಸುಧಾಕರ ಎಂ ಎಚ್, ಡಾ.ನಂದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
