ಸುಳ್ಯ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿದರು. ಎಒಎಲ್ಇಯ
ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲ್. ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಲೀಲಾಧರ್ ಡಿ. ವಿ. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಆರ್ತಿಕ್ ಕೆ. ಎಸ್., ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀಜಾ ರೈ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.









