ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆಗಸ್ಟ್ 29ರಂದು ಜಿಲ್ಲೆಯ ವಿವಿಧ ಸ್ಥಳಗಳಿಗೆ, ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿ, ಸಲಹೆ ಸೂಚನೆಗಳನ್ನು ನೀಡಿದರು. ಉಳ್ಳಾಲ ತಾಲೂಕಿನ
ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆಗೆ ಭೇಟಿ ನೀಡಿ, ಗ್ರಾಮ ಲೆಕ್ಕಾಧಿಕಾರಿ ಕಚೇರಿಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಸೋಮೇಶ್ವರ ಪುರಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಲ್ಲಾಳದ ಮುಕ್ಕಚೇರಿಯ ಪ್ರಾಥಮಿಕ ಶಾಲೆಗೆ ಕಂದಾಯ ಸಚಿವರ ಭೇಟಿ ನೀಡಿ ಪರಿಶೀಲನೆ ಮಾಡಿ
ಉಲ್ಲಾಳ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಂಗಳೂರು ತಾಲೂಕು ಕಚೇರಿ ಪರಿಶೀಲನೆ ನಡೆಸಿದರು. ಮಂಗಳೂರು ತಾಲೂಕು ಕಚೇರಿಯಲ್ಲಿರುವ ಉಪನೋಂದಣಿ ಕಚೇರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.