ಸುಳ್ಯ: ಸುಳ್ಯ ತಾಲೂಕಿನ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಎಲ್ಲಾ ಗ್ರಾಮಗಳ ಗ್ರಾಮ

ಲೆಕ್ಕಾಧಿಕಾರಿಗಳ ಸಭೆ ನಡೆಯಿತು. ಇಲಾಖೆಗಳ ಮಾಹಿತಿ ಪಡೆದ ಅವರು ಎಲ್ಲಾ ಕೆಲಸ ಕಾರ್ಯಗಳನ್ನು ಯಾವುದೇ ರೀತಿಯಲ್ಲಿ ಜನರಿಗೆ ತೊಂದರೆ ಆಗದ ರೀತಿಯಲ್ಲಿ ಕೆಲಸಗಳನ್ನು ಮಾಡಬೇಕು ಎಂದು ಅವರು ಸೂಚಿಸಿದರು.ಸಭೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮಿ, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ ,ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್. ವಿವಿಧ ಗ್ರಾಮ ಲೆಕ್ಕಾಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.