ಸುಳ್ಯ:ರಾಜ್ಯದಲ್ಲಿ 40 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ. ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಸುಳ್ಯ ಹಾಗು
ಪಂಜ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರು ದಕ್ಷ ಹಾಗು ಜನಪ್ರಿಯ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.
ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರಿಗೂ ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದೆ.
ಕಾವೇರಿ ವನ್ಯ ಜೀವಿ ವಿಭಾಗದ ಹನೂರು ವನ್ಯಜೀವಿ ವಲಯದ ಅರಣ್ಯಾಧಿಕಾರಿ ನಿರಂಜನ್ ಶೆಟ್ಟಿ ಅವರನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಯಾಗಿ ಮತ್ತು ಕುದುರೆಮುಖ ವನ್ಯ ಜೀವಿ ವಲಯದ ಅರಣ್ಯಾಧಿಕಾರಿ ಚೇತನ್ ಹೆಚ್.ಪಿ. ಅವರನ್ನು ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.








