ಸುಳ್ಯ:ಅರಣ್ಯ ಇಲಾಖೆಯ ಸುಬ್ರಹ್ಮಣ್ಯ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಿತು. ಸುಳ್ಯ ವಲಯ ಅರಣ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಎನ್.ಮಂಜುನಾಥ್, ಗಿರೀಶ್ ಆರ್, ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಯಾಗಿದ್ದ ವಿಮಲ್ ಬಾಬು ಅವರನ್ನು
ಸನ್ಮಾನಿಸಿ ಬೀಳ್ಕೊಡಲಾಯುತು. ಸುಬ್ರಹ್ಮಣ್ಯ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅಭಿನಂದನಾ ಭಾಷಣ ಮಾಡಿದರು. ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಸುಳ್ಯ ವಲಯ ಅರಣ್ಯಾಧಿಕಾರಿ ನಿರಂಜನ್ ಶೆಟ್ಟಿ, ಸುಳ್ಯ ತಾಲೂಕು

ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು,ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ಚೇತನ್.ಹೆಚ್.ಪಿ, ಪಂಜ ವಲಯ ಅರಣ್ಯಾಧಿಕಾರಿ ಸಂಧ್ಯಾ,
ಪ್ರಮುಖರಾದ ಕೃಷ್ಣ ಕಾಮತ್ ಅರಂಬೂರು, ನಿತ್ಯಾನಂದ ಮುಂಡೋಡಿ, ರಾಧಾಕೃಷ್ಣ ಬೊಳ್ಳೂರು, ಹರೀಶ್ ಕಂಜಿಪಿಲಿ, ಎಂ.ಬಿ.ಸದಾಶಿವ, ಡಾ.ಲೀಲಾಧರ್ ಡಿ.ವಿ, ಎಂ.ವೆಂಕಪ್ಪ ಗೌಡ, ಸೋಮಶೇಖರ ಕೊಯಿಂಗಾಜೆ, ಶಶಿಧರ ಎಂ.ಜೆ, ಅರಣ್ಯ ಇಲಾಖೆಯ

ಸಿಬ್ಬಂದಿಗಳು ಮಾತನಾಡಿ ಶುಭ ಹಾರೈಸಿದರು. ಅರಣ್ಯ ಇಲಾಖೆಯ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ವತಿಯಿಂದ, ಸಾರ್ವಜನಿಕರ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಎನ್.ಮಂಜುನಾಥ್, ಗಿರೀಶ್ ಆರ್, ಹಾಗು ವಿಮಲ್ ಬಾಬು ಅವರು ಸನ್ಮಾನಕ್ಕೆ ಉತ್ತರಿಸಿ ಕೃತಜ್ಞತೆ ಸಲ್ಲಿಸಿದರು.








