ಸುಳ್ಯ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ. ನೇಮಕಗೊಂಡಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿವಿಯ ಉಪಕುಲಪತಿಗಳು ಈ ನೇಮಕ ಮಾಡಿದ್ದಾರೆ.
ವಿವಿ ವ್ಯಾಪ್ತಿಯ 90 ಆಯುರ್ವೇದ ಕಾಲೇಜುಗಳಿಂದ ಡಾ.ಲೀಲಾಧರ್ ಸೇರಿ ಇಬ್ಬರು ಅಕಾಡೆಮಿಕ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡಿದ್ದಾರೆ ಎಂದು ತಿಳಿದು ಬಂದಿದೆ.









