ಸುಳ್ಯ: ಸುಳ್ಯ ಅಟೋ ರಿಕ್ಷಾ ಚಾಲಕರ (ಬಿ.ಎಂ ಎಸ್) ಸಂಘವು ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಜ.26.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮ ನಡೆಯಲಿದೆ
ಎಂದು ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಅದ್ಯಕ್ಷ ರಾಧಾಕೃಷ್ಣ ಬೈತಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ರಿಕ್ಷಾ
ಚಾಲಕರು ಹಾಗೂ ಈ ಹಿಂದೆ ರಿಕ್ಷಾ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತರಾದ ಚಾಲಕರುಗಳ ಮಾಹಾ ಸಂಗಮ ನಡೆಯಲಿದೆ ಎಂದು ತಿಳಿಸಿದರು. 1999 ರಲ್ಲಿ ಗೋಪಾಲಕೃಷ್ಣ ಭಟ್ ಅಧ್ಯಕ್ಷತೆಯಲ್ಲಿ ಸ್ಥಾಪನೆಗೊಂಡ ಸಂಘವು ಮುಂದೆ ವಿಜಯಕುಮಾರ್ ಉಬರಡ್ಕ ಅದ್ಯಕ್ಷತೆಯಲ್ಲಿ ಸಾಗಿ ಬಂದು ಕಳೆದ 9 ವರ್ಷಗಳಿಂದ ರಾಧಾಕೃಷ್ಣ ಬೈತಡ್ಕರ ಅದ್ಯಕ್ಷತೆಯಲ್ಲಿ ಮುನ್ನಡೆಯುತ್ತಾ ಬಂದು ಈ ವರ್ಷ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ.
ಈಗಾಗಲೇ ರಚಿಸಿಕೊಂಡಿರುವ ತಾಲೂಕಿನ ಸುಬ್ರಹ್ಮಣ್ಯ, ಹರಿಹರ, ಗುತ್ತಿಗಾರು, ಪಂಜ ಕುಕ್ಕುಜಡ್ಕ, ಜಾಲ್ಸೂರು, ಪೆರಾಜೆ , ಕಲ್ಲುಗುಂಡಿ ಘಟಕಗಳ ಸದಸ್ಯರ ಸಹಕಾರದೊಂದಿಗೆ ಜ.26 ರಂದು ಸುಳ್ಯದಲ್ಲಿ ಬೆಳ್ಳಿ ಸಂಭ್ರಮದ ಅದ್ದೂರಿ ಕಾರ್ಯಕ್ರಮ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ನೇತೃತ್ವದಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಎಸ್. ಅಂಗಾರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ ಕೆ .ವಿ ಚಿದಾನಂದ, ಮಣಿಪಾಲ ಮಜ್ದೂರ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಎನ್, ಸುಳ್ಯ ನ.ಪಂ ಸದಸ್ಯೆ ಕಿಶೋರಿ ಶೇಟ್, ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು, ಸುಳ್ಯ ತಾಲೋಕು ಅಟೋ ರಿಕ್ಷಾ ಚಾಲಕರ ಸಂಘದ ಸ್ಥಾಪಕಾದ್ಯಕ್ಷ ಗೋಪಾಲಕೃಷ್ಣ ಭಟ್, ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ರಿಕ್ಷಾ ಚಾಲಕರ ಸಂಘದ ಕಾನೂನು ಸಲಹೆಗಾರ ಭಾಸ್ಕರ್ ರಾವ್, ರಿಕ್ಷಾ ಚಾಲಕರ ಸಂಘದ ಮಾಜೀ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ ಭಾಗವಹಿಸಲಿದ್ದಾರೆ.
ಭ್ರಾಮರಿ ನಾಟ್ಯಾಲಯ ಕುಕ್ಕುಜಡ್ಕ , ವಿದುಷಿ ಜಯಶ್ರೀ ಕುಳ್ಳಂಪಾಡಿ ಮತ್ತು ಸಾಂಸ್ಕೃತಿಕ ವೈಭವ , ಯೋಗ, ಹಾಸ್ಯ, ಡ್ಯಾನ್ಸ್ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಸ್ಟಿಯಲ್ಲಿ ಅಟೋ ರಿಕ್ಷಾ ಚಾಲಕರ ಸಂಘದ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್ ಪೈಚಾರು, ಸಂಘದ ಕಾನೂನು ಸಲಹೆಗಾರ ಭಾಸ್ಕರ್ ರಾವ್, ಅಟೋ ರಿಕ್ಷಾ ಚಾಲಕರ ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಉಪಕಾರ್ಯದರ್ಶಿ ಸುರೇಂದ್ರ ಕಾಮತ್, ಕೋಶಾಧಿಕಾರಿ ನಿತ್ಯಾನಂದ, ಮನೋಹರ್ ಚೊಕ್ಕಾಡಿ, ಮೋಹನ್ ಚೊಕ್ಕಾಡಿ,ಸಂಗಪ್ಪ, ಸುದಾಕರ್ ನಾಯಕ್, ಮೊದಲಾದವರು ಉಪಸ್ಥಿತರಿದ್ದರು.








