ಚಂಡೀಗಢ: ಕಾರು ಅಪಘಾತದ ಬಳಿಕ ಚೇತರಿಸಿಕೊಂಡಿರುವ ವಿಕೆಟ್ಕೀಪರ್ ಬ್ಯಾಟರ್ ರಿಷಭ್ ಪಂತ್, ಐಪಿಎಲ್ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಪಂತ್ ಕಣಕ್ಕಿಳಿದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪಡೆಯ
ಎರಡನೇ ವಿಕೆಟ್ ಪತನವಾದಾಗ ಕ್ರೀಸ್ಗೆ ಬಂದ ಪಂತ್ಗೆ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು, ಸಹ ಆಟಗಾರರು ಎದ್ದು ನಿಂತು ಚಪ್ಪಾಳೆ ತಟ್ಟಿ ಶುಭಕೋರಿದರು.ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಅವರು 13 ಎಸೆತಗಳಲ್ಲಿ ಎರಡು ಬೌಂಡರಿ ಸಹಿತ 18 ರನ್ ಗಳಿಸಿ ಔಟಾದರು
2023ರ ಹೊಸ ವರ್ಷಾಚರಣೆಗೆ ಮನೆಗೆ ತೆರಳುವ ಸಂದರ್ಭ ರಿಷಭ್ ಅವರ ಬಿಎಂಡಬ್ಲ್ಯು ಕಾರು, 2022ರ ಡಿ.30ರ ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಅಪಘಾತವಾಗಿತ್ತು. ಈ ವೇಳೆ ಪಂತ್ ಅವರ ತಲೆ, ಕಾಲು, ಬಲಗೈ ಹಾಗೂ ಬೆನ್ನಿಗೆ ಗಾಯವಾತ್ತು. ಬಳಿಕ ಕ್ರಿಕೆಟ್ನಿಂದ ದೂರ ಉಳಿದಿದ್ದ ಪಂತ್ ಮತ್ತೆ ಕ್ರಿಕೆಟ್ ಅಂಗಣಕ್ಕೆ ಮರಳಿದ್ದಾರೆ.





