ಮಂಗಳೂರು: ರಾಜ್ಯ ಸರಕಾರವು 15 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಸಿ.ಬಿ.ರಿಷ್ಯಂತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ
ಡಾ. ವಿಕ್ರಮ್ ಅಮಟೆ ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ.ಬಿ ರಿಷ್ಯಂತ್ ಇತ್ತೀಚೆಗೆ ದ.ಕ. ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದೀಗ ಅವರನ್ನು ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
2013ರ ಬ್ಯಾಚ್ನ ಐಪಿಎಸ್ ಅಧಿಕಾರಿ ರಿಷ್ಯಂತ್ ಮೂಲತಃ ಬೆಂಗಳೂರಿನವರು. 2016ರಲ್ಲಿ ಪುತ್ತೂರು ಎಎಸ್ಪಿಯಾಗಿದ್ದರು. ಮೈಸೂರು, ದಾವಣಗೆರೆ, ಬಾಗಲಕೋಟೆಯಲ್ಲಿ ಎಸ್ಪಿಯಾಗಿದ್ದರು.