ಪಂಜ:ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಖ್ಯಾತ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.ಪಂಜದಲ್ಲಿ ನಡೆದ ಸಾರ್ವಜನಿಕ. ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ
ಆಗಮಿಸಿದ ಅವರು ಶ್ರೀ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಡಾ.ಆರ್.ಕೆ.ನಾಯರ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರನ್ನು ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ರಾದ ಸಂತೋಷ್ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ, ಪುಷ್ಪ ಡಿ.ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.