ಸುಳ್ಯ: ಪರಿಸರದ ಪ್ರತಿಯೊಂದು ಜೀವಿಗೂ ಪ್ರಾಮುಖ್ಯತೆಯನ್ನು ನೀಡುವ ಜವಾಬ್ದಾರಿ ಮಾನವನಿಗೆ ಇದ್ದರೆ ಮಾತ್ರ ಪರಿಸರ ಸಂರಕ್ಷಣೆ ಮಾಡಬಹುದು. ಇದರ ಸೂಕ್ಷ್ಮತೆಯನ್ನು ಅರಿತು ಪ್ರತಿಯೊಬ್ಬರೂ ಪರಿಸರ ಸ್ನೇಹಿಯಾಗಿ ಬದುಕಬೇಕು ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಆರ್.ಕೆ.ನಾಯರ್ ಹೇಳಿದರು. ಸುಳ್ಯ ರೋಟರಿ ಕ್ಲಬ್ ವತಿಯಿಂದ
ನೀಡುವ ವನಸಿರಿ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ‘ಕಾಡುಗಳು ಹಾಗೂ ಪರಿಸರ ಪ್ರಜ್ಞೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಪ್ರತಿ ರೋಟರಿ ಸದಸ್ಯರು ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕೆಂದು ಕರೆ ನೀಡಿದರು. ರಾಮಚಂದ್ರ ಪಿ ಹಾಗೂ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವರು ಪ್ರಶಸ್ತಿ ಪ್ತದಾನ ಮಾಡಿ ಗೌರವಿಸಿದರು. ವೇದಿಕೆಯಲ್ಲಿ ಪೂರ್ವಾಧ್ಯಕ್ಷ ಪ್ರಭಾಕರ ನಾಯರ್, ನಿಯೋಜಿತ ಅಧ್ಯಕ್ಷ ಆನಂದ ಖಂಡಿಗ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ ರೋಟರಿ ಕಾರ್ಯದರ್ಶಿ ಮಧುರಾ ಎಂ ಆರ್. ವಂದಿಸಿದರು. ಈ ಸಂದರ್ಭದಲ್ಲಿ ಆರ್ ಕೆ ನಾಯರ್ ಇವರು ರೋಟರಿ ಪ್ರಮುಖ ಯೋಜನೆಗೆ ದೇಣಿಗೆಯನ್ನು ನೀಡಿ ಸಹಕರಿಸಿದರು.