ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.ಮೊದಲ ಹಂತವಾಗಿ
ಸುಳ್ಯ ಪೊಲೀಸ್ ಠಾಣೆ, ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಜುಲೈ 23ರಿಂದ ಕಾರ್ಯರಂಭಗೊಂಡಿದೆ. ಈ ಕ್ಯಾಮರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ, ಸಂಬಂಧಪಟ್ಟ ವಾಹನದ ಮಾಲೀಕರಿಗೆ ನೋಟೀಸ್ ನೀಡಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.








