ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ 20ಕಿಂತ ಹೆಚ್ಚಿನ ರಸ್ತೆಗಳು ಮಳೆಯಿಂದ ಹಾನಿಯಾಗಿದ್ದು ಇದನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅನುದಾನ ಒದಗಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು
ಭೇಟಿಯಾಗಿ ಮನವಿ ಸಲ್ಲಿಸಿದರು. ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ತುರ್ತು ಅನುದಾನವನ್ನು ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಲಾಯಿತು.ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಈ ಹಿಂದೆಯೂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಸಚಿವರು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಶಾಸಕರು ಸಚಿವರಲ್ಲಿ ಅನುದಾನದ ಬೇಡಿಕೆ ಇಟ್ಟಿದ್ದರು. ಮನವಿ ನೀಡುವ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಪದ್ಮನಾಭ ಪೆರುವಾಜೆ ಉಪಸ್ಥಿತರಿದ್ದರು.















